ಎ.13ಕ್ಕೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ
ಮಂಗಳೂರು, ಎ.4: ಲೋಕಸಭಾ ಚುನಾವಣೆ ಪ್ರಚಾರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಎ.13ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ದ.ಕ. ಜಿಲ್ಲಾ ಬಿಜೆಪಿ ಪ್ರಭಾರ ಹಾಗೂ ಶಾಸಕ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಬಂಟ್ವಾಳದಲ್ಲಿ ಬಿಜೆಪಿ ಶಾಸಕರ ತುರ್ತುಸಭೆ ನಡೆಸಿದ ಶಾಸಕ ಸುನೀಲ್ಕುಮಾರ್, ಕಾರ್ಯಕ್ರಮದಲ್ಲಿ ಎರಡು ಲಕ್ಷಕ್ಕೂ ಅಧಿಕ ಮೋದಿ ಅಭಿಮಾನಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಎ.6ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಚಪ್ಪರ ಮುಹೂರ್ತ ಕಾರ್ಯಕ್ರಮದಲ್ಲಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಆರ್.ಅಶೋಕ್ ಭಾಗವಹಿಸಲಿದ್ದಾರೆ ಎಂದರು.
ಬಿಜೆಪಿ ಶಾಸಕರ ತುರ್ತುಸಭೆಯಲ್ಲಿ ಮೋದಿ ಸಾರ್ವಜನಿಕ ಸಭೆಯ ಕಾರ್ಯಕ್ರಮದ ವ್ಯವಸ್ಥೆಯ ಬಗ್ಗೆ ಸಮಿತಿ ರಚಿಸಲಾಯಿತು.
ಸಭೆಯಲ್ಲಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಳಿನ್ಕುಮಾರ್ ಕಟೀಲ್, ಶಾಸಕರಾದ ಸಂಜೀವ ಮಠಂದೂರು, ಎಸ್.ಅಂಗಾರ, ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಡಾ.ಭರತ್ ವೈ. ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು.
Next Story