ಡಾ.ಬಾಬು ಜಗಜೀವನ್ ರಾಂ ಜನ್ಮದಿನ ಆಚರಣೆ
ಮಂಗಳೂರು, ಎ.5: ಹಸಿರುಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ 112ನೇ ಜನ್ಮ ದಿನಾಚರಣೆಯನ್ನು ಶುಕ್ರವಾರ ದ.ಕ. ಜಿಪಂನ ನೇತ್ರಾವತಿ ಸಭಾಂಗಣದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅಧ್ಯಕ್ಷತೆ ವಹಿಸಿದ್ದರು. ನಗರದ ರಥಬೀದಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ನಾಗವೇಣಿ ಮಂಚಿ ಉಪನ್ಯಾಸ ನೀಡಿದರು.
ಸಮಾರಂಭದಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಎಸ್ಪಿ ಬಿ.ಎಂ.ಲಕ್ಷ್ಮಿಪ್ರಸಾದ್, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಉಪಕಾರ್ಯದರ್ಶಿ ವಿವಿಧ ಇಲಾಖೆಯಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
Next Story