ಡಾ.ಬಾಬು ಜಗಜೀವನರಾಂ ಜಯಂತಿ ಆಚರಣೆ
ಉಡುಪಿ, ಎ.5: ಜಿಲ್ಲಾಡಳಿತ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಘಟನೆಗಳ ಸಹಯೋಗ ದಲ್ಲಿ ಶುಕ್ರವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಸಿರುಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಂ ಅವರ 112ನೇ ಜನ್ಮದಿನೋತ್ಸವವನ್ನು ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿಪಂ ಸಿಇಓ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಎಎಸ್ಪಿ ಕುಮಾರ ಚಂದ್ರ, ಪೌರಾಯುಕ್ತ ಆನಂದ್ ಕಲ್ಲೋಳಿಕರ್ ಅಲ್ಲದೇ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
Next Story