ಸುರತ್ಕಲ್: ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಹಾರಿಸ್ ಬೈಕಂಪಾಡಿ
ಸುರತ್ಕಲ್: ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ (ಸುರತ್ಕಲ್ ) ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಹಾರಿಸ್ ಬೈಕಂಪಾಡಿ ಅವರನ್ನು ನೇಮಕಗೊಳಿಸಲಾಗಿದೆ.
ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಹಾರಿಸ್ ಬೈಕಂಪಾಡಿ ಅವರನ್ನು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಬಿ. ಮೊಯ್ದಿನ್ ಬಾವ ಅವರ ನಿರ್ದೇಶನದಂತೆ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದಾಶಿವ ಶೆಟ್ಟಿ ಮತ್ತು ದ.ಕ. ಜಿಲ್ಲಾ ಪ್ರಚಾರ ಸಮಿತಿಯ ಅಧ್ಯಕ್ಷ ಧನಂಜಯ ಅಡಪಂಗಾಯ ಶಿಪಾರಸ್ಸಿನ ಮೇರೆಗೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಎಚ್.ಕೆ. ಪಾಟೀಲ್ ಅವರು ನೇಮಕಗೊಳಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story