ಬಂಟ್ವಾಳ: ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ- ದೂರು
ಬಂಟ್ವಾಳ, ಎ.6: ಮಗಳ ಮೇಲೆ ತಂದೆ ಅತ್ಯಾಚಾರ ಎಸಗಿದ ಆರೋಪದಡಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರ್ಷಗಳ ಹಿಂದೆ ಮನೆಯಲ್ಲಿ ಯಾರು ಇಲ್ಲದಿರುವಾಗ ಮತ್ತು ಲಾಡ್ಜ್ವೊಂದಕ್ಕೆ ಕರೆದೊಯ್ದು ತಂದೆ ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತೆ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾಳೆ.
ಈ ಮೊದಲು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಫೊಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದ ಸಂತ್ರಸ್ತೆಯಾಗಿರುವ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಬಳಿಕ ಮಕ್ಕಳ ಕಲ್ಯಾಣ ಸಮಿತಿಯು ವಿಚಾರಣೆ ನಡೆಸಿತ್ತು. ಆದರೆ, ಉಳ್ಳಾಲದ ಪ್ರಕರಣದ ಹೊರತಾಗಿ ವರ್ಷಗಳ ಹಿಂದೆ ತಂದೆಯೇ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬುವುದಾಗಿ ಆಕೆ ಹೇಳಿಕೆಯನ್ನು ನೀಡಿದ್ದಳು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಫೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
Next Story