ಕೆಪಿಸಿಸಿಯಿಂದ ಅಮೃತ್ ಶೆಣೈ, ಶಾನುಲ್ ಹಕ್ ಅಮಾನತು
ಪಕ್ಷ ವಿರೋಧಿ ಚಟುವಟಿಕೆ
ಅಮೃತ್ ಶೆಣೈ
ಬೆಂಗಳೂರು, ಎ. 6: ಉಡುಪಿ-ಚಿಕ್ಕಮಗಳೂರು 'ಲೋಕಸಭಾ ಚುನಾವಣೆ-2019' ಮೈತ್ರಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕಾಂಗ್ರೆಸ್ ಸಮಿತಿ ಸದಸ್ಯ ಅಮೃತ್ ಶೆಣೈರನ್ನು ಪಕ್ಷ ವಿರೋಧಿ ಚಟುವಟಿಕೆ ಆಧಾರದಲ್ಲಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಅಮಾನತು ಮಾಡಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.
ಬೀದರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಿಎಸ್ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕಾಂಗ್ರೆಸ್ ಸಮಿತಿ ಸದಸ್ಯ ಶಾನುಲ್ ಹಕ್ ಬುಖಾರಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆಧಾರದ ಮೇರೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಅಮಾನತು ಮಾಡಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಜಿ ಷಫೀಉಲ್ಲಾ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story