ಹಾಲಿ ಸಂಸದರ ಮುಖ ನೋಡಿ ಮತ ಹಾಕುವುದಿಲ್ಲ; ಬಿಜೆಪಿ ಶಾಸಕ ಯತ್ನಾಳ್
ವಿಜಯಪುರ, ಎ. 6: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾಲಿ ಸಂಸದರ ಮುಖ ನೋಡಿ ಮತ ಹಾಕುವುದಿಲ್ಲ. ಬದಲಾಗಿ, ಪ್ರಧಾನಿ ನರೇಂದ್ರ ಮೋದಿ ನೋಡಿ ಜನರು ಮತ ಹಾಕುತ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ನಗರದ ಸಿದ್ದೇಶ್ವರ ದೇವಸ್ಥಾನದಲ್ಲಿ ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಯಾಗಲಿ ಎಂದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರು ಸುದ್ದಿಗಾರ ರೊಂದಿಗೆ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಟ್ಟು ಬೇರೆ ಯಾರಿಗೂ ಪ್ರಧಾನಿಯಾಗುವ ಅರ್ಹತೆ ಇಲ್ಲ ಎಂದು ತಿಳಿಸಿದರು. ಇದೇ ವೇಳೆ ಹಾಲಿ ಸಂಸದ, ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ವಿರೋಧ ಮಾಡಿದವರಿಗೆ ಕ್ಷೇತ್ರದ ಜನ ಒದ್ದಿದ್ದಾರೆ ಎಂದು ಟೀಕಿಸಿದರು.
Next Story