ಪಿ. ಎ. ಕಾಲೇಜ್ ಆಫ್ ಫಾರ್ಮಸಿ ವತಿಯಿಂದ ರಕ್ತದಾನ ಶಿಬಿರ
ಮಂಗಳೂರು: ರಾಷ್ಟ್ರೀಯ ಸೇವಾ ಯೋಜನಾ ಘಟಕ, ಪಿ.ಎ. ಕಾಲೇಜ್ ಆಫ್ ಫಾರ್ಮಸಿ, ನಡುಪದವು ಮತ್ತು ಯೆನಪೋಯ ಬ್ಲಡ್ ಬ್ಯಾಂಕ್ ದೇರಳಕಟ್ಟೆ ಇವರ ಸಹಯೋಗದೊಂದಿಗೆ ಎ.8ರಂದು ಬೆಳಗ್ಗೆ 9:30ರಿಂದ ಮಧ್ಯಾಹ್ನ 2 ರವರೆಗೆ ಪಿ.ಎ. ಇಂಜಿನಿಯರಿಂಗ್ ಕಾಲೇಜು, ನಡುಪದವು ನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಪಿ.ಎ. ಎಜುಕೇಶನಲ್ ಟ್ರಸ್ಟ್ ನ ಕಾರ್ಯನಿರ್ವಾಹಕ ನಿರ್ದೇಶಕ ಪಿ.ಎ. ಅಬ್ದುಲ್ಲಾ ಇಬ್ರಾಹೀಮ್ ಇವರು ಈ ಶಿಬಿರವನ್ನು ಉದ್ಘಾಟಿಸಲಿದ್ದು, ಪಿ.ಎ. ಎಜುಕೇಶನ್ನ ಶೈಕ್ಷಣಿಕ ನಿರ್ದೇಶಕ ಡಾ. ಸಫ್ರಾಝ್ ಜೆ. ಹಾಶಿಂ, ಪಿ.ಎ. ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಅಬ್ದುಲ್ ಶರೀಫ್, ಪಿ.ಎ. ಪಾಲಿಟೆಕ್ನಿಕ್ ಪ್ರಾಂಶುಪಾಲರಾದ ಪ್ರೊ. ಕೆ.ಪಿ. ಸೂಫಿ, ಪಿ.ಎ. ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲರಾದ ಡಾ. ಸಲೀಮುಲ್ಲಾ ಖಾನ್, ಎಂ.ಬಿ.ಎ. ವಿಭಾಗದ ನಿರ್ದೇಶಕಿ ಡಾ. ಲತಾ ಕೃಷ್ಣನ್, ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಝೊಹರಾ ಅಬ್ಬಾಸ್, ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ರಕ್ತದಾನ ಮಾಡುವುದರ ಮೂಲಕ ಈ ಶಿಬಿರವನ್ನು ಯಶಸ್ವಿಗೊಳಿಸಬೇಕೆಂದು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜಕ ಡಾ. ಮುಹಮ್ಮದ್ ಮುಬೀನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.