ಮಿನಿ ಟೆಂಪೋ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು
ಬೈಂದೂರು, ಎ.8: ಮಿನಿ ಟೆಂಪೋ ಹಾಗೂ ದ್ವಿಚಕ್ರ ವಾಹನಗಳ ಮಧ್ಯೆ ತೊಂಡ್ಲೆ ಸೇತುವೆ ಸಮೀಪ ಇಂದು ಬೆಳಗ್ಗೆ 11ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಶಿರೂರು ನಿವಾಸಿ, ಸವಾರ ತಿಮ್ಮಪ್ಪ ಪೂಜಾರಿ(40) ಎಂದು ಗುರುತಿಸಲಾಗಿದೆ. ಸಹ ಸವಾರಳಾದ ಶಾರದ ಎಂಬವರು ಗಂಭೀರವಾಗಿ ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರು ಆ್ಯಕ್ಟೀವಾ ಹೊಂಡಾದಲ್ಲಿ ಬೈಂದೂರು ಕಡೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಮಿನಿ ಟೆಂಪೋ ಢಿಕ್ಕಿ ಹೊಡೆಯಿತು. ಇದರ ಪರಿಣಾಮ ದ್ವಿಚಕ್ರ ವಾಹನ ಸವಾರರಿಬ್ಬರು ರಸ್ತೆ ಬಿದ್ದರೆನ್ನಲಾಗಿದೆ. ಈ ವೇಳೆ ಮಿನಿ ಟೆಂಪೊ ಸೇತುವೆಗೆ ಢಿಕ್ಕಿ ಹೊಡೆದಿದ್ದು, ಆಕ್ಟೀವಾ ಹೊಂಡಾ ಮಿನಿ ಟೆಂಪೊೀದ ಹಿಂದುಗಡೆ ಸಿಕ್ಕಿ ಹಾಕಿಕೊಂಡಿತ್ತು.
ಇದರಿಂದ ಗಂಭೀರವಾಗಿ ಗಾಯಗೊಂಡ ತಿಮ್ಮಪ್ಪ ಪೂಜಾರಿ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Next Story