ಉಡುಪಿ: ವಿಧಾನಸಭಾ ಕ್ಷೇತ್ರವಾರು ಹೆಚ್ಚುವರಿ ಮತಯಂತ್ರಗಳ ಹಂಚಿಕೆ
ಉಡುಪಿ, ಎ.9: ಉಡುಪಿ -ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಸಂಬಂಧಿಸಿ ಅಗತ್ಯವಿರುವ ಹೆಚ್ಚುವರಿ ಮತಯಂತ್ರಗಳನ್ನು ಜಿಲ್ಲಾ ಚುನಾವಣಾ ಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧ್ಯಕ್ಷತೆಯಲ್ಲಿ ಇಂದು ವಿಧಾನಸಭಾ ಕ್ಷೇತ್ರವಾರು ಹಂಚಿಕೆ ಮಾಡಲಾಯಿತು.
ಕುಂದಾಪುರ ವಿಧಾನ ಸಭಾ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ 25 ಬ್ಯಾಲೆಟ್ ಯುನಿಟ್, 8 ಕಂಟ್ರೋಲ್ ಯುನಿಟ್, 5 ವಿವಿ ಪ್ಯಾಟ್, ಉಡುಪಿ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ 30 ಬ್ಯಾಲೆಟ್ ಯುನಿಟ್, 12 ಕಂಟ್ರೋಲ್ ಯುನಿಟ್, 12 ವಿವಿ ಪ್ಯಾಟ್, ಕಾಪು ಕ್ಷೇತ್ರಕ್ಕೆ ಹೆಚ್ಚುವರಿಯಾಗಿ 26 ಬ್ಯಾಲೆಟ್ ಯುನಿಟ್, 9 ಕಂಟ್ರೋಲ್ ಯುನಿಟ್, 12 ವಿವಿ ಪ್ಯಾಟ್, ಕಾರ್ಕಳ ವಿಧಾನ ಸಭಾ ಕ್ಷೇತ್ರಕ್ಕೆ ಹೆಚ್ಚುವರಿಯಾಗಿ 26 ಬ್ಯಾಲೆಟ್ ಯುನಿಟ್, 9 ಕಂಟ್ರೋಲ್ ಯುನಿಟ್, 5 ವಿವಿ ಪ್ಯಾಟ್ಗಳನ್ನು ಹಂಚಿಕೆ ಮಾಡಲಾಯಿತು.
ಎಲ್ಲಾ ಮತಯಂತ್ರ ಮತ್ತು ವಿವಿ ಪ್ಯಾಟ್ ಯಂತ್ರಗಳನ್ನು ಮತ್ತೊಮ್ಮೆ ಕೂಲಂಕುಷವಾಗಿ ಪರೀಕ್ಷಿಸಿ, ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರಗಳಿಗೆ ನೀಡು ವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉಪಸ್ಥಿತರಿದ್ದರು.