ಎ.11 ರಿಂದ ಎಸ್ಸೆಸ್ಸೆಫ್ ನಿಂದ ಓರ್ಬಿಟ್ ಕೆರಿಯರ್ ಗೈಡೆನ್ಸ್ ಕಾರ್ಯಾಗಾರ
ಮಂಗಳೂರು, ಎ.10: ಎಸ್ಸೆಸ್ಸೆಫ್ ರಾಜ್ಯ ವಿಸ್ಡಂ ಹಾಗೂ ಕ್ಯಾಂಪಸ್ ಸಮಿತಿಗಳ ವತಿಯಿಂದ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ‘ಎಸೆಸೆಲ್ಸಿ ಹಾಗೂ ಪಿಯುಸಿ ನಂತರ ಮುಂದೇನು?’ ಎಂಬ ಮಾಹಿತಿಯನ್ನು ಒಳಗೊಂಡ ಓರ್ಬಿಟ್ ಕೆರಿಯರ್ ಗೈಡನ್ಸ್ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯದ್ ಸಿ.ಟಿ.ಎಂ.ಉಮರ್ ಅಸ್ಸಖಾಫ್ ತಂಙಳ್ ಮನ್ಶರ್ ನೇತೃತ್ವದಲ್ಲಿ ರಾಜ್ಯಾದ್ಯಂತದ ಎಲ್ಲಾ ಡಿವಿಷನ್ ಕೇಂದ್ರಗಳಲ್ಲಿ ಎ.11 ರಿಂದ 25ರವರೆಗೆ ನಡೆಯಲಿದೆ ಎಂದು ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story