ಉಡುಪಿ: ದೇವರ ದಾಸಿಮಯ್ಯ ಜಯಂತಿ ಆಚರಣೆ
ಉಡುಪಿ, ಎ.10: ಜಿಲ್ಲಾಡಳಿತ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದಲ್ಲಿ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಬಾಂಗಣದಲ್ಲಿ ದೇವರ ದಾಸಿಮಯ್ಯ ಜಯಂತಿಯನ್ನು ಬುಧವಾರ ಸರಳವಾಗಿ ಆಚರಿಸಲಾಯಿತು.
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ದೇವರ ದಾಸಿಮಯ್ಯ ದಿನಾಚರಣೆಯನ್ನು ಉಡುಪಿ ಜಿಲ್ಲಾ ಪಂಚಾಯತ್ನ ಸಿಇಓ ಸಿಂಧೂ ಬಿ. ರೂಪೇಶ್ ಉದ್ಘಾಟಿಸಿದರು.
ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಷಾ ಜೇಮ್ಸ್ ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಸ್ವಾಗತಿಸಿದರು. ಹಿರಿಯ ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.
Next Story