ಕ್ರಿಕೆಟ್ ಬೆಟ್ಟಿಂಗ್: ಆರೋಪಿ ಸೆರೆ
ಮಂಗಳೂರು, ಎ.11: ಮೊಬೈಲ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ತೋಕೂರು ನಿವಾಸಿ ದೀಕ್ಷಿತ್ (24) ಎಂಬಾತನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.
ಐಪಿಎಲ್ ಕ್ರಿಕೆಟ್ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಈತ ತೋಕೂರು ಬಸ್ ತಂಗುದಾಣ ಸಮೀಪ ೆನ್ ಮೂಲಕ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನಿಂದ 4,650 ರೂ. ನಗದು ಹಾಗೂ ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಕಾರ್ಯಾಚರಣೆಯಲ್ಲಿ ಪಣಂಬೂರು ಇನ್ಸ್ಪೆಕ್ಟರ್ ಸತ್ಯನಾರಾಯಣ ಕೆ. ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
Next Story