ಎ. 15: ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಷನ್ ದಅವಾ ಕಾನ್ಫರೆನ್ಸ್
ಉಪ್ಪಿನಂಗಡಿ: ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಷನ್ ದಅವಾ ಕಾನ್ಫರೆನ್ಸ್, ಎಸ್ಸೆಸ್ಸೆಫ್ ಉಪ್ಪಿನಂಗಡಿ ಡಿವಿಷನ್ ಅಧ್ಯಕ್ಷ ಮಸೂದ್ ಸಅದಿ ಅಧ್ಯಕ್ಷತೆಯಲ್ಲಿ ಎ.15 ರಂದು ಮಧ್ಯಾಹ್ನ 2 ಗಂಟೆಗೆ ಮದೀನತ್ತುಲ್ ಮುನವ್ವರ ಎಜ್ಯುಕೇಶನಲ್ ಕಾಂಪ್ಲೆಕ್ಸ್ ಮೂಡಡ್ಕದಲ್ಲಿ ನಡೆಯಲಿದೆ.
ಸ್ವಲಾಹುದ್ದೀನ್ ಸಖಾಫಿ ಮೂಡಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಎಸ್ಸೆಸ್ಸೆಫ್ ದ.ಕ ಜಿಲ್ಲಾ ಉಪಾಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ಮುಖ್ಯ ಪ್ರಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story