ಪಿಯುಸಿ: ಖುಷಿಗೆ 6ನೇ ರ್ಯಾಂಕ್; ವಿದ್ಯೋದಯಕ್ಕೆ ಶೇ.100 ಫಲಿತಾಂಶ
ಖುಷಿ
ಉಡುಪಿ, ಎ.15: ಉಡುಪಿ ವಿದ್ಯೋದಯ ಟ್ರಸ್ಟ್ನ ಅಂಗಸಂಸ್ಥೆಯಾದ ವಿದ್ಯೋದಯ ಪದವಿಪೂರ್ವ ಕಾಲೇಜಿನಿಂದ 2018-19ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಾಜರಾದ ವಿದ್ಯಾರ್ಥಿಗಳೆಲ್ಲಾ ತೇರ್ಗಡೆ ಗೊಂಡು ಶೇ.100 ಫಲಿತಾಂಶ ದಾಖಲಿಸಿದೆ.
ವಿಜ್ಞಾನ ವಿಭಾಗದಲ್ಲಿ ಕಾಲೇಜಿನ ವಿದ್ಯಾರ್ಥಿನಿ ಖುಷಿ ಒಟ್ಟು 589 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದಿದ್ದಾಳೆ. ಖುಷಿ ಹಿಂದಿಯಲ್ಲಿ 98, ಇಂಗ್ಲೀಷ್ 96, ಭೌತಶಾಸ್ತ್ರ 98, ರಸಾಯನ ಶಾಸ್ತ್ರ 99, ಗಣಿತ 100 ಮತ್ತು ಜೀವಶಾಸ್ತ್ರ 98 ಅಂಕಗಳನ್ನು ಗಳಿಸುವ ಮೂಲಕ ಒಟ್ಟು 589ಗಳೊಂದಿಗೆ ರಾಜ್ಯದಲ್ಲಿ 6ನೇ ರ್ಯಾಂಕ್ ಗಳಿಸಿದ್ದಾಳೆ ಎಂದು ಕಾಲೇಜಿನ ಪ್ರಾಂಶುಪಾಲ ಎ.ಎಲ್.ಛಾತ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಬಾರಿ ವಿಜ್ಞಾನ ವಿಭಾಗದಲ್ಲಿ 266 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 149 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 116 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ ಒಬ್ಬ ವಿದ್ಯಾರ್ಥಿ ದಿ್ವತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 30 ಮಂದಿ ವಿಶಿಷ್ಟ ಶ್ರೇಣಿಯಲ್ಲಿ, 60 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 8 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.