ಉಡುಪಿ: ಎಸಿಬಿಯಿಂದ ಅಹವಾಲು ಸ್ವೀಕಾರ
ಉಡುಪಿ, ಎ.27: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿಗಳು ಎ.29ರಂದು ಬೈಂದೂರು ಪ್ರವಾಸಿ ಮಂದಿರದಲ್ಲಿ ಬೆಳಿಗ್ಗೆ 11:00ರಿಂದ ಅಪರಾಹ್ನ 1:00 ಗಂಟೆಯವರೆಗೆ, ಅಪರಾಹ್ನ 2:30ರಿಂದ ಸಂಜೆ 4:30ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಹಾಗೂ ಎ.30ರಂದು ಬೆಳಗ್ಗೆ 11ರಿಂದ ಅಪರಾಹ್ನ 1:00 ಗಂಟೆಯವರೆಗೆ ಕಾರ್ಕಳ ಪ್ರವಾಸಿ ಮಂದಿರ ದಲ್ಲಿ ಹಾಗೂ 2:30ರಿಂದ ಸಂಜೆ 4:30ರವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಮೊಕ್ಕಾಂ ಇದ್ದು, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಸಾರ್ವಜನಿಕ ನೌಕರರು ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದ್ದಲ್ಲಿ ಅಥವಾ ನಿರ್ಲಕ್ಷ ತೋರಿದ್ದಲ್ಲಿ, ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಪೊಲೀಸ್ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story