ಉಡುಪಿ: ಸಿಇಟಿ ಪರೀಕ್ಷೆಗೆ ಒಟ್ಟು 2168 ಮಂದಿ ಗೈರು
ಉಡುಪಿ, ಎ.29: ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಬಯಸುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂದು ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 2168 ಮಂದಿ ಗೈರುಹಾಜರಾ ಗಿದ್ದಾರೆ. ಜಿಲ್ಲೆಯ ಒಟ್ಟು 11ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳಿಲ್ಲದೇ, ಶಾಂತಿಯುತವಾಗಿ ಪರೀಕ್ಷೆ ನಡೆದಿದೆ ಎಂದು ಜಿಲ್ಲಾ ಪದವಿ ಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗ್ಗೆ ನಡೆದ ಜೀವಶಾಸ್ತ್ರ ಪರೀಕ್ಷೆಗೆ 1908 ಮಂದಿ ಹಾಗೂ ಅಪರಾಹ್ನ ನಡೆದ ಗಣಿತ ಪರೀಕ್ಷೆಗೆ 260 ಮಂದಿ ಗೈರು ಹಾಜರಾಗಿದ್ದಾರೆ. ಎರಡೂ ಪರೀಕ್ಷೆಗಳಿಗೆ ತಲಾ 4769 ಮಂದಿ ಹೆಸರು ನೊಂದಾಯಿಸಿಕೊಂಡಿದ್ದು, ಇವರಲ್ಲಿ ಜೀವಶಾಸ್ತ್ರ ಪರೀಕ್ಷೆಗೆ 2861 ಮಂದಿ ಹಾಗೂ ಗಣಿತ ಪರೀಕ್ಷೆಗೆ 5409 ಮಂದಿ ಹಾಜರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story