ಎಸೆಸೆಲ್ಸಿ: ತುಂಬೆ ಆಂಗ್ಲ-ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ
ಬಂಟ್ವಾಳ, ಎ. 30: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ತುಂಬೆ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಶೇ.100ರಷ್ಟು ಫಲಿತಾಂಶ ದಾಖಲಿಸಿದೆ.
ಕನ್ನಡ ಮಾಧ್ಯಮ
ಕನ್ನಡ ಮಾಧ್ಯಮ ಪ್ರೌಢಶಾಲೆಯ 38 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ. 100ರಷ್ಟು ಫಲಿತಾಂಶ ದಾಖಲಿಸಿದೆ. 38 ವಿದ್ಯಾರ್ಥಿಗಳಲ್ಲಿ 4 ಡಿಸ್ಟಿಂಕ್ಷನ್, 24 ಪ್ರಥಮ ದರ್ಜೆ ಹಾಗೂ 10 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿದ್ಯಾರ್ಥಿನಿ ಮನಿಷಾ ಅವರು 565 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ಆಂಗ್ಲ ಮಾಧ್ಯಮ
ತುಂಬೆ ಆಂಗ್ಲ ಮಾಧ್ಯಮ ಪ್ರೌಢಶಾಲೆಯಿಂದ 57 ವಿದ್ಯಾರ್ಥಿಗಳಲ್ಲಿ 57 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 100ರಷ್ಟು ಫಲಿತಾಂಶ ದಾಖಲಿಸಿದೆ.
ರೋಹಿತ್ ಎಸ್. ಹೊಳ್ಳ ಎಂಬ ವಿದ್ಯಾರ್ಥಿ 594 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾನೆ. 57 ವಿದ್ಯಾರ್ಥಿಗಳಲ್ಲಿ 9 ಡಿಸ್ಟಿಂಕ್ಷನ್, 44 ಪ್ರಥಮ ದರ್ಜೆ ಹಾಗೂ 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ ಎಂದು ಶಾಲೆಯ ಪ್ರಕಟನೆ ತಿಳಿಸಿದೆ.