ಮೇ 3 ರಂದು ಕದ್ರಿ ದೇವಸ್ಥಾನಕ್ಕೆ ಹಸಿರು ಹೊರೆ ಕಾಣಿಕೆ
ಮಂಗಳೂರು, ಮೇ 1: ಇತಿಹಾಸ ಪ್ರಸಿದ್ಧ ಕದ್ರಿ ಮಂಜುನಾಥ ಕ್ಷೇತ್ರದಲ್ಲಿ ನಡೆಯುವ ಅಷ್ಟೋತ್ತರ ಸಹಸ್ರ ಬ್ರಹ್ಮ ಕಲಶಾಭಿಷೇಕ, ಮಹಾದಂಡ ರುದ್ರಾಭಿಷೇಕ ಹಾಗೂ ಮಹಾರುದ್ರಯಾಗದ ಪ್ರಯುಕ್ತ ಮೇ 3 ರಂದು ಹಸಿರು ಹೊರೆ ಕಾಣಿಕೆ ಮೆರವಣಿಗೆ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ದೇವಳದ ಹೊರೆಕಾಣಿಕೆ ಸಮಿತಿಯ ಪ್ರಧಾನ ಸಂಚಾಲಕ ಗಣೇಶ್ ಶೆಟ್ಟಿ, ಅಂದು ಮಧ್ಯಾಹ್ನ 2.30ಕ್ಕೆ ನಗರದ ನೆಹರೂ ಮೈದಾನದಿಂದ ಸುಮಾರು 150 ವಾಹನಗಳಲ್ಲಿ ದೇವಳಕ್ಕೆ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ ಎಂದರು.
ಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ರಮಾನಂದ ಭಂಡಾರಿ, ಸುಧಾಕರ ರಾವ್ ಪೇಜಾವರ ಉಪಸ್ಥಿತರಿದ್ದರು.
Next Story