ಎಸೆಸೆಲ್ಸಿ : ಚೈತನ್ಯ ಪಬ್ಲಿಕ್ ಸ್ಕೂಲ್ ಗೆ ಉತ್ತಮ ಫಲಿತಾಂಶ
ಸುರತ್ಕಲ್: ಕೃಷ್ಣಾಪುರ 4ನೇ ಬ್ಲಾಕಿನ ಚೈತನ್ಯ ಪಬ್ಲಿಕ್ ಸ್ಕೂಲ್ ಈ ವರ್ಷದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದುಕೊಂಡಿದೆ.
ಒಟ್ಟು 39 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 12 ಮಂದಿ ಡಿಸ್ಟಿಂಶನ್, 23 ಮಂದಿ ಪ್ರಥಮ ಶ್ರೇಣಿ ಹಾಗೂ ಇಬ್ಬರು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.
ಶಾಹಿನಾ ಮತ್ತು ಸಹನಾ ಶೇ. 94% ಅಂಕಗಳನ್ನು ಪಡೆಯುವ ಮೂಲಕ ಶಾಲೆಯಲ್ಲಿ ಪ್ರಥಮ ಸ್ಥಾನಿಗಳಾಗಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
Next Story