ಮಟ್ಕಾ: ಇಬ್ಬರು ಆರೋಪಿಗಳ ಬಂಧನ
ಮಂಗಳೂರು, ಮೇ 2: ನಗರದ ಕುದ್ರೋಳಿ ಸಮೀಪ ಮಟ್ಕಾ ಬರೆಯುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂದರು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಶಾಂತಿನಗರ ಕಾವೂರು ಶರಣ್ ಶೆಟ್ಟಿ (35) ಮತ್ತು ಕುದ್ರೋಳಿ ನಿವಾಸಿ ರಾಮಚಂದ್ರ (40) ಬಂಧಿತರು.
ಆರೋಪಿ ಶರಣ್ ಶೆಟ್ಟಿ ಕುದ್ರೋಳಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಬರೆದು ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಬಂದರು ಪೊಲೀಸ್ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈತನ ಜತೆ ಗ್ರಾಹಕ ರಾಮಚಂದ್ರ ಎಂಬಾತನನ್ನು ಬಂಧಿಸಲಾಗಿದೆ.
ಆರೋಪಿಗಳಿಂದ 4,600 ರೂ. ಹಾಗೂ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಇನ್‌ಸ್ಪೆಕ್ಟರ್ ಗೋವಿಂದರಾಜ್, ಪಿಎಸ್‌ಐ ಪ್ರದೀಪ್ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
Next Story