ಪ್ರಕೃತಿ ಚಿಕಿತ್ಸೆ ಮುಗಿಸಿ ಇಂದು ವಾಪಸ್ಸಾಗಲಿರುವ ಸಿಎಂ ಕುಮಾರಸ್ವಾಮಿ
ಉಡುಪಿ, ಮೇ 3: ಕಾಪು ಸಮೀಪದ ಮೂಳೂರಿನ ಸಾಯಿರಾಧ ರೆಸಾರ್ಟ್ನಲ್ಲಿ ಕಳೆದ ಐದು ದಿನಗಳಿಂದ ಆಯುರ್ವೇದ ಹಾಗೂ ಪ್ರಕೃತಿ ಚಿಕಿತ್ಸೆಯಲ್ಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಅಪರಾಹ್ನದ ವೇಳೆಗೆ ಚಿಕಿತ್ಸೆ ಮುಗಿಸಿ ಚಿಕ್ಕಮಗಳೂರಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.
ಈ ನಡುವೆ ಮುಖ್ಯಮಂತ್ರಿಯ ಪುತ್ರ, ಚಿತ್ರನಟ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಇಂದು ಮೂಳೂರಿಗೆ ಆಗಮಿಸಿದ್ದು ತಂದೆ ಮತ್ತು ಅಜ್ಜ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿದ್ದಾರೆ.
ಇಂದು ಅಪರಾಹ್ನ ಕುಮಾರಸ್ವಾಮಿ ಮತ್ತು ನಿಖಿಲ್ ಇಬ್ಬರೂ ಮೂಳೂರಿನಿಂದ ಚಿಕ್ಕಮಗಳೂರಿಗೆ ತೆರಳಲಿದ್ದಾರೆ. ಶೃಂಗೇರಿ ಮತ್ತು ಕೊಪ್ಪದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
Next Story