ರಮಝಾನ್: ಮಸೀದಿಗಳಿಗೆ ಬಂದೋಬಸ್ತ್ ನೀಡಲು ಮುಸ್ಲಿಂ ಸೆಂಟ್ರಲ್ ಕಮಿಟಿ ಒತ್ತಾಯ
ಮಂಗಳೂರು, ಮೇ 3: ಇದೇ ಮೇ 6 ರಿಂದ ರಮಝಾನ್ ಉಪವಾಸ ವ್ರತ ಆರಂಭಗೊಳ್ಳುತ್ತಿದ್ದು, ದ.ಕ. ಜಿಲ್ಲೆಯ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಮಸೀದಿ ಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ನೀಡುವಂತೆ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ ನೇತೃತ್ವ ದಲ್ಲಿ ನಿಯೋಗವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿತು.
ಇದಕ್ಕೆ ಸ್ಪಂದಿಸಿದ ಪೊಲೀಸ್ ಆಯುಕ್ತರು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನಿಯೋಗದಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷರಾದ ಹಾಜಿ ಇಬ್ರಾಹೀಂ ಕೋಡಿಜಾಲ್, ಕೆ.ಅಶ್ರಫ್, ಕಾರ್ಯದರ್ಶಿಗಳಾದ ಸಿ.ಎಂ. ಮುಸ್ತಫ, ಎಂ.ಎ. ಅಶ್ರಫ್, ಹಾಜಿ ಮುಹಮ್ಮದ್ ಬಪ್ಪಳಿಗೆ, ಡಿ.ಎಂ. ಅಸ್ಲಂ, ಅಹ್ಮದ್ ಬಾವ ಬಜಾಲ್ ಮೊದಲಾದವರು ಉಪಸ್ಥಿತರಿದ್ದರು.
Next Story