ಜೆಎಸ್‌ಎಸ್ ವಿಶೇಷಚೇತನರ ಪಾಲಿಟೆಕ್ನಿಕ್‌ಗೆ ಅರ್ಜಿ ಆಹ್ವಾನ
ಉಡುಪಿ, ಮೇ 4: ಮೈಸೂರಿನಲ್ಲಿ ವಿಶೇಷಚೇತನ ವಿದ್ಯಾರ್ಥಿಗಳಿಗೆ ಡಿಪ್ಲೋಮ ಮಟ್ಟದಲ್ಲಿ ತಾಂತ್ರಿಕ ಶಿಕ್ಷಣ ಸೌಲ್ಯ ಕಲ್ಪಿಸುವ ಉದ್ದೇಶದಿಂದ ಜೆಎಸ್‌ಎಸ್ ಮಹಾವಿದ್ಯಾಪೀಠ ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್ ಪ್ರಾರಂಭಿಸಿದ್ದು, ಉಡುಪಿ ಜಿಲ್ಲೆಯ ವ್ಯಾಪ್ತಿಯ ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಠ ಶೇ.35 ಅಂಕಗಳೊಂದಿಗೆ ತೇರ್ಗಡೆಗೊಂಡ ವಿಶೇಷಚೇತನ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ 2019-20ನೇ ಸಾಲಿಗೆ ಮೂರು ವರ್ಷ ಗಳ ಅವಧಿಯ ಡಿಪ್ಲೊಮಾ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಭಾಗಶ: ಮತ್ತು ಪೂರ್ಣ ಅಂಧತ್ವವುಳ್ಳ ಅ್ಯರ್ಥಿಗಳು ಇಂಗ್ಲೀಷ್ ಬ್ರೈಲ್ ಭಾಷೆಯ ಜ್ಞಾನ ಹೊಂದಿದ್ದಲ್ಲಿ ಆದ್ಯತೆಯನ್ನು ನೀಡಲಾಗುವುದು. ಪಾಲಿಟೆಕ್ನಿಕ್‌ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುವುದು. ವಿದ್ಯಾರ್ಥಿ, ವಿದ್ಯಾರ್ಥಿನಿ ಯರಿಗೆ ಪ್ರತ್ಯೇಕ ವಿದ್ಯಾರ್ಥಿ ನಿಲಯದ ಸೌಲಭ್ಯವಿದೆ.
ಪ್ರವೇಶಕ್ಕೆ ಅರ್ಜಿಗಳನ್ನು ಜೆಎಸ್‌ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಚಯ, ಮೈಸೂರು (ಸಾಮಾನ್ಯ ವರ್ಗದ ಅ್ಯರ್ಥಿಗಳು ರೂ.100 ಹಾಗೂ ಎಸ್‌ಸಿ/ಎಸ್‌ಟಿ/ಸಿ1 ವರ್ಗದವರಿಗೆ ರೂ.50) ನಗದು ಅಥವಾ ಡಿಡಿ/ ಎಂಒ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ ಕಳುಹಿಸಿ ಪಡೆಯಬಹುದು. ಅಥವಾ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಜೂ.15 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್-www.jsspda.org- ದೂ.ಸಂ: 0821- 2548315,2548316 ಅಥವಾ ಇಮೇಲ್ jsspda@gmail.com ಅನ್ನು ಸಂಪರ್ಕಿಸುವಂತೆ ಜೆಎಸ್‌ಎಸ್ ವಿಶೇಷ ಚೇತನರ ಪಾಲಿಟೆಕ್ನಿಕ್‌ನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.