ಯುವ ಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ, ಮೇ 4:ಉಡುಪಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮಿಯಾಲಜಿ ವಿಭಾಗ, ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಬೆಂಗಳೂರು (ನಿಮ್ಹಾನ್ಸ್) ಇವರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರ ದಲ್ಲಿ ಯುವ ಪರಿವರ್ತಕರಾಗಿ ಕಾರ್ಯನಿರ್ವಹಿಸಲು ಇಚ್ಛಿಸುವ 21ರಿಂದ 35 ವರ್ಷದೊಳಗಿನ ಯುವಕ/ಯುವತಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರಾಗಿ ಕಾರ್ಯ ನಿರ್ವಹಿಸುವವರು, ಯುವ ಜನರ ಪ್ರೌಢಾವಸ್ಥೆಯ ಸಮಸ್ಯೆಗಳು ಸೇರಿದಂತೆ ಹಲವು ಸಮಸ್ಯೆಗಳು ಪರಿಹಾರ ಕಂಡುಕೊಳ್ಳುವ ಬಗ್ಗೆ ಸಾರ್ವಜನಿಕ ಅರಿವು ಕಾರ್ಯಕ್ರಮವನ್ನು ಆಯೋಜಿಸುವಲ್ಲಿ ಶ್ರಮಿಸಬೇಕಾಗುತ್ತದೆ.
ಪದವಿ ತೇರ್ಗಡೆ ಹೊಂದಿದ ಆಸಕ್ತ ಯುವಕ-ಯುವತಿಯರು ತಮ್ಮ ಸ್ವ-ವಿವರಗಳೊಂದಿಗೆ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇಲ್ಲಿಗೆ ಮೇ 9ರೊಳಗೆ ಅರ್ಜಿ ಸಲ್ಲಿಸಬೇಕು. ಆಯ್ಕೆಯಾದ ಅ್ಯರ್ಥಿಗಳಿಗೆ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ(ನಿಮ್ಹಾನ್ಸ್) ತರಬೇತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಯುವ ಸ್ಪಂದನ ಕೇಂದ್ರದ ಕ್ಷೇತ್ರ ಸಂಪರ್ಕಾಧಿಕಾರಿ ಧನರಾಜ್, ಮೊಬೈಲ್:6364814314 ಹಾಗೂ ಸಮಾಲೋಚಕಿ ಶ್ಯಾಮಲ, ಮೊಬೈಲ್:9743292051ನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.