ಉಜಿರೆ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರು ಯುವಕರು ಮೃತ್ಯು
ಬೆಳ್ತಂಗಡಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಜಿರೆಯ ಸಿದ್ಧವನ ಗುರುಕುಲ ಬಳಿ ಶನಿವಾರ ಸಂಜೆ ನಡೆದಿದೆ.
ಮೃತರನ್ನು ಡಿಪ್ಲೊಮ ವಿದ್ಯಾರ್ಥಿ ಮಡಂತ್ಯಾರ್ ನಿವಾಸಿ ಕ್ಷೀತಿಜ್ ಜೈನ್ (24) ಹಾಗು ಉಜಿರೆ ನಿವಾಸಿ ವಿಘ್ನೇಶ್ ಎಂದು ತಿಳಿದುಬಂದಿದೆ.
ಧರ್ಮಸ್ಥಳ ಕಡೆಯಿಂದ ಉಜಿರೆಗೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು, ಕಾರಿನಲ್ಲಿ ಹರ್ಷಿತ್, ಕ್ಷೀತಿಜ್, ವಿಘ್ನೇಶ್, ಸುಶಾಂತ್ ಇದ್ದರು ಎಂದು ಹೇಳಲಾಗಿದೆ.
ಬೆಳ್ತಂಗಡಿ ವೃತ್ತ ನಿರೀಕ್ಷಕರ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.