ಬಜೆ ಡ್ಯಾಂಗೆ ಶಾಸಕ ರಘುಪತಿ ಭಟ್ ಭೇಟಿ
ಹಿರಿಯಡ್ಕ, ಮೇ 6: ಉಡುಪಿ ನಗರಕ್ಕೆ ನೀರು ಪೂರೈಸುವ ಬಜೆ ಡ್ಯಾಂನಲ್ಲಿ ನೀರಿನ ಸಂಗ್ರಹ ಖಾಲಿಯಾಗಿರುವ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಸೋಮವಾರ ಸ್ಥಳಕೆ್ಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಂಪ್ ಅಳವಡಿಸಿದ ಸ್ಥಳಕ್ಕೂ ಭೇಟಿ ನೀಡಿದ ಶಾಸಕರು, ಜನರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿ ದರು. ಅದೇ ರೀತಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿದ ಶಾಸಕರು ನೀರಿನ ಸಮಸ್ಯೆಗೆ ಪರಿಹಾರ ನೀಡುವಂತೆ ಆಗ್ರಹಿಸಿದರು.
ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ನಗರಾಡಳಿತದ ಮೂಲಕ ಪ್ರತಿ ವಾರ್ಡ್‌ಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವುದಾಗಿ ಭರವಸೆ ನೀಡಿದರು. ಬಜೆ ಡ್ಯಾಂನಲ್ಲಿ ಹೂಳೆತ್ತುವ ಕಾರ್ಯ ಕೂಡ ಮಾಡುವು ದಾಗಿ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಪ್ರಭಾಕರ್ ಪೂಜಾರಿ, ಬಾಲಕೃಷ್ಣ ಶೆಟ್ಟಿ ಕಕ್ಕುಂಜೆ, ಗಿರಿಧರ ಆಚಾರ್ಯ ಕರಂಬಳ್ಳಿ, ಗಿರೀಶ್ ಅಂಚನ್, ರಶ್ಮಿ ಚಿತ್ತರಂಜನ್ ಭಟ್, ಪ್ರಮುಖರಾದ ಕಿಶೋರ್ ಕರಂಬಳ್ಳಿ, ದಿನಕರ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.