ಸಿಬಿಎಸ್‌ಇ : ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ಗೆ ಶೇ.100 ಫಲಿತಾಂಶ
ಕುಂದಾಪುರ: ಕೋಡಿಯ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್‌ನಿಂದ ಪ್ರಥಮ ವರ್ಷದ ಸಿಬಿಎಸ್‌ಇ 10ನೇ ತರಗತಿಯ ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ಗಳಿಸಿದೆ.
ಹೆಚ್ಚಿನ ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ವಿದ್ಯಾರ್ಥಿನಿ ಉಮ್ಮು ತಮೀಮಾ ಶಾಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ಸಾಧನೆಗೆ ಕಾರಣರಾದ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಶಾಲಾಡಳಿತ ಸಮಿತಿ ಮತ್ತು ಬ್ಯಾರೀಸ್ ಗ್ರೂಪ್ ಅಧ್ಯಕ್ಷ ಸೈಯದ್ ಮುಹಮ್ಮದ್ ಬ್ಯಾರಿ ಅಭಿನಂದಿಸಿದ್ದಾರೆ.
Next Story