ಮಂಗಳೂರು: ಗ್ರಾಮ ಪಂಚಾಯತ್ ಉಪಚುನಾವಣೆ
ಮಂಗಳೂರು, ಮೇ 6: ದ.ಕ. ಜಿಲ್ಲೆಯ ಮಂಗಳೂರು ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳಿಗೆ ಉಪಚುನಾವಣೆ ಘೋಷಿಸಿದ್ದು, ಮೇ 29 ರಂದು ಚುನಾವಣೆ ನಡೆಯಲಿದೆ.
38-ಪಡುಪೆರಾರ ಗ್ರಾಮ ಪಂಚಾಯತ್‌ನ 2-ಮೂಡುಪೆರಾರ, 55-ತಲಪಾಡಿ ಗ್ರಾಮ ಪಂಚಾಯತ್‌ನ 5-ತಲಪಾಡಿ, ಹಾಗೂ ಪುತ್ತೂರು ತಾಲೂಕಿನ 1- ಕಬಕ ಗ್ರಾಮ ಪಂಚಾಯತ್‌ನ 1- ಕಬಕ, 34 ನೆಕ್ಕಿಲಾಡಿ ಗ್ರಾಮ ಪಂಚಾಯತ್‌ನ 2-34 ನೆಕ್ಕಿಲಾಡಿ, 34-5 ನೆಕ್ಕಿಲಾಡಿ ಹಾಗೂ ಬೆಳ್ತಂಗಡಿ ತಾಲೂಕಿನ 28-ಉಜಿರೆ ಗ್ರಾಮ ಪಂಚಾಯತ್‌ನ 4-ಉಜಿರೆ, 11-ಉಜಿರೆ ಮತ್ತು 29 ಕೊಯ್ಯೂರು ಗ್ರಾಮ ಪಂಚಾಯತ್‌ನ 2-ಕೊಯ್ಯೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.
ಚುನಾವಣೆ ನಡೆಯುವ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯು ಮೇ 13ರಿಂದ 31ರವರೆಗೆ ಜಾರಿಯಲ್ಲಿರುತ್ತದೆ.
ಮೇ 13ರಂದು ಜಿಲ್ಲಾಧಿಕಾರಿ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದಾರೆ, ನಾಮಪತ್ರ ಸಲ್ಲಿಸಲು ಕೊನೆಯ ದಿನ ಮೇ 16, ನಾಮಪತ್ರ ಪರಿಶೀಲಿಸುವ ದಿನಾಂಕ ಮೇ 17, ಉಮೇದುವಾರಿಕೆಯನ್ನು ಹಿಂದೆಗೆದುಕೊಳ್ಳುಲು ಕೊನೆಯ ದಿನಾಂಕ ಮೇ 20, ಮತದಾನ ಅವಶ್ಯವಿದ್ದರೆ ಮೇ 29 ರಂದು ಪೂರ್ವಾಹ್ನ 7 ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಸಬಹುದು.
ಮರು ಮತದಾನ ಅವಶ್ಯವಿದ್ದರೆ ಮತದಾನವನ್ನು ನಡೆಸಬೇಕಾದ ದಿನ ಮೇ 30 ರಂದು ಪೂರ್ವಾಹ್ನ 7 ರಿಂದ ಸಂಜೆ 5 ಗಂಟೆಯವರೆಗೆ, ಮತಗಳ ಎಣಿಕೆ ಮೇ 31 ರಂದು ಪೂರ್ವಾಹ್ನ 8 ಗಂಟೆಯಿಂದ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟನೆ ತಿಳಿಸಿದೆ.