ವಿ.ವಿ.ಕಾಲೇಜಿನಲ್ಲಿ ಎಂ.ಕಾಂ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ
ಮಂಗಳೂರು, ಮೇ 6: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ಅಂತಿಮ ವರ್ಷದ ಎಂ.ಕಾಂ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ‘ಅತಿಸರ್ಗ-2019’ ರವೀಂದ್ರ ಕಲಾಭವನ ಸಂಕೀರ್ಣದಲ್ಲಿ ಇತ್ತೀಚೆಗೆ ನಡೆಯಿತು.
ಮುಖ್ಯಅತಿಥಿಯಾಗಿ ಪಾಲ್ಗೊಂಡಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಉದಯ್ ಕುಮಾರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಮರ್ಥ್ಯಕ್ಕೆ ಅನುಸಾರವಾಗಿ ಅವರಲ್ಲಿರುವ ವಿನೂತನ ಚಿಂತನೆಗಳನ್ನು ಕಾರ್ಯರೂಪಕ್ಕೆ ತಂದು ಸದೃಢಗೊಳಿಸಬೇಕೆಂದು ನುಡಿದರು.
ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಡಾ.ಎ.ಸಿದ್ದೀಕ್ ಮಾತನಾಡಿ, ವಿದ್ಯಾರ್ಥಿಗಳ ಚಿಂತನೆ ಕೇವಲ ಶೈಕ್ಷಣಿಕ ಕ್ಷೇತ್ರಕ್ಕೆ ಮೀಸಲಾಗದೆ ತಮ್ಮಲ್ಲಿರುವ ಕೌಶಲ್ಯವನ್ನು ಸದುಪಯೋಗಗೊಳಿಸಿ ಉದ್ಯಮ ಕ್ಷೇತ್ರದಲ್ಲಿ ಹೊಸ ಸಂಚಲನವನ್ನು ಮೂಡಿಸಬೇಕೆಂದು ಕರೆ ನೀಡಿದರು.
ಡಾ.ಅನಸೂಯ ರೈ, ಡಾ. ಸುಭಾಷಿಣಿ ಶ್ರೀವತ್ಸ ಅವರು ಅಂತಿಮ ಎಂ.ಕಾಂ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿ ಪ್ರತಿನಿಧಿ ಗಳಾದ ವರ್ಷಾ ವಿ., ದೀಕ್ಷಿತ್, ಅರ್ಚನಾ ಶೆಣೈ, ಪೂಜಾ ಸಿ.ಪಿ., ಜೋವಿಟಾ ಹಾಗೂ ಪೂಜಾ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.
ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು. ಪೂಜಾ ಸ್ವಾಗತಿಸಿದರು. ಲಕ್ಷ್ಮೀ ವಂದಿಸಿದರು. ಹರಿಣಿ ಕಾರ್ಯಕ್ರಮ ನಿರೂಪಿಸಿದರು. ನಂತರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.