ಮಂಗಳೂರು: ಎಸೆಸೆಲ್ಸಿ, ಪಿಯು ಸಾಧಕರಿಗೆ ಕ್ಯಾಂಪಸ್ ಫ್ರಂಟ್ ಸನ್ಮಾನ
ಮಂಗಳೂರು: ಈ ಬಾರಿಯ ಎಸೆಸೆಲ್ಸಿ ಮತ್ತು ಪಿಯುಸಿ ಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಕ್ಯಾಂಪಸ್ ಫ್ರಂಟ್ ವತಿಯಿಂದ ಸನ್ಮಾನ ಕಾರ್ಯಕ್ರಮವು ಮಂಗಳೂರಿನಲ್ಲಿ ಇಂದು ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿಸ ಕ್ಯಾಂಪಸ್ ಫ್ರಂಟ್ ರಾಜ್ಯಾಧ್ಯಕ್ಷರಾದ ಫಯಾಝ್ ದೊಡ್ಡಮನೆ ಮಾತನಾಡಿ 'ವಿದ್ಯಾರ್ಥಿಗಳು ಕೇವಲ ಪುಸ್ತಕಗಳಿಗೆ ಸೀಮಿತರಾಗದೆ ಶಿಕ್ಷಣದಲ್ಲಿ ಸಾಧನೆ ಮಾಡುವುದರ ಜೊತೆಗೆ ಸಾಮಾಜಿಕ ಜೀವನದಲ್ಲು ಕಾಳಜಿ ವಹಿಸಿ ಕೆಲಸ ಮಾಡಬೇಕು ಮತ್ತು ಸಮಾಜದ ಉತ್ತಮ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಸಂದರ್ಭದಲ್ಲಿ ಸಮಿತಿ ಸದಸ್ಯೆ ಮುಫೀದ ರಹ್ಮಾನ್, ಜಿಲ್ಲಾ ಕಾರ್ಯದರ್ಶಿ ನಿಝಾಮ್, ಜೊತೆ ಕಾರ್ಯದರ್ಶಿ ಸುಹೈನಾ, ಸದಸ್ಯೆ ಸಫ್ರೀನಾ, ಆಯತ್ ಮತ್ತು ವಿದ್ಯಾರ್ಥಿನಿಯರ ಪೋಷಕರು ಉಪಸ್ಥಿತರಿದ್ದರು.
Next Story