ನೀರಿನ ಸಮಸ್ಯೆ ಬಗೆಹರಿಸದಿದ್ದರೆ ಪ್ರತಿಭಟನೆ: ಕರವೇ
ಉಡುಪಿ, ಮೇ 8: ಕಳೆದ ಹಲವಾರು ದಿನಗಳಿಂದ ಉಡುಪಿ ಜನತೆ ನೀರಿಲ್ಲದೆ ಪರದಾಡುವಂತಾಗಿದೆ. ಆದರೆ ಜಿಲ್ಲಾಡಳಿತ ಹಾಗೂ ಉಡುಪಿ ನಗರಸಭೆ ಸಮಸ್ಯೆ ಬಗೆಹರಿಸಲು ಯಾವುದೇ ರೀತಿಯ ವಿಶೇಷ ಕಾಳಜಿ ತೋರಿಸುತ್ತಿಲ್ಲ. ಲೋಕಸಭಾ ಚುನಾವಣೆಯವರೆಗೆ ದಿನದ 24 ಗಂಟೆ ಬರುತ್ತಿದ್ದ ನೀರು ಮತದಾನದ ಮರುದಿನವೇ ಮಾಯವಾಗಿದೆ.
ಮುಂದಿನ ನಾಲ್ಕು ದಿನದ ಒಳಗಡೆ ಜಿಲ್ಲಾಡಳಿತ ಹಾಗೂ ನಗರಸಭೆ ನೀರಿನ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸದೇ ಇದ್ದಲ್ಲಿ ಉಡುಪಿ ನಗರಸಭೆಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ (ಪ್ರವೀಣ್ ಶೆಟ್ಟಿ ಬಣ) ಉಡುಪಿ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.
Next Story