ಶಂಕರಾಚಾರ್ಯರಿಂದ ಹಿಂದೂ ಧರ್ಮ ರಕ್ಷಣೆ: ಉಡುಪಿ ಸಿಇಓ
ಉಡುಪಿ, ಮೇ 9: 8ನೇ ಶತಮಾನದಲ್ಲಿ ಹಲವು ಧರ್ಮಗಳ ಸವಾಲಿನ ನಡುವೆ ಹಿಂದೂ ಧರ್ಮವನ್ನು ರಕ್ಷಿಸುವಲ್ಲಿ ಶಂಕರಾಚಾರ್ಯರು ಮಹತ್ವದ ಪಾತ್ರವನ್ನು ವಹಿಸಿದ್ದರು ಎಂದು ಉಡುಪಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ ಬಿ.ರೂಪೇಶ್ ಹೇಳಿದ್ದಾರೆ.
ಗುರುವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಶ್ರೀಶಂಕರಾಚಾರ್ಯ ಜಯಂತಿ ಕಾರ್ಯಕ್ರಮವನ್ನು ಉ ್ಘಾಟಿಸಿ ಅವರು ಮಾತನಾಡುತಿದ್ದರು.
ಅದ್ವೈತ ಧರ್ಮ ಪ್ರತಿಪಾದಿಸಿದ ಶಂಕರಾಚಾರ್ಯರು ಕೇವಲ 32 ವರ್ಷ ಮಾತ್ರ ಜೀವಿಸಿದ್ದು, ತಮ್ಮ ಜೀವಿತಾವಧಿಯಲ್ಲಿ ಇಡೀ ಭಾರತ ದೇಶವನ್ನು ಸುತ್ತಿ, ಇತರೆ ಧರ್ಮಗಳ ನಡುವೆ ಕಳೆದುಹೋಗುವ ಹಂತದಲ್ಲಿದ್ದ ಹಿಂದೂ ಧರ್ಮದ ಉಳಿವಿಗಾಗಿ ದೇಶದ ನಾಲ್ಕು ಮೂಲೆಗಳಲ್ಲಿ ಪೀಠಗಳನ್ನು ಸ್ಥಾಪಿಸುವ ಮೂಲಕ ಹಿಂದೂ ಧರ್ಮವನ್ನು ಕ್ಷಿಸಿದ್ದರು ಎಂದವರು ಹೇಳಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಉಡುಪಿ ಅದ್ವೈತ ಬಳಗದ ಸದಸ್ಯ, ಪತ್ರಕರ್ತ ಕಿರಣ್ ಮಂಜನಬೈಲು ಮಾತನಾಡಿ, ಸನಾತನ ಹಿಂದೂ ಧರ್ಮಕ್ಕೆ ಆಘಾತವಾಗಿದ್ದ ಸಮಯದಲ್ಲಿ ಹಿಂದೂ ಧರ್ಮದ ಪುನರುತ್ಥಾನ ಮಾಡಿದ ಶಂಕರಾಚಾರ್ಯರು, ಅದ್ವೈತ ತತ್ವವನ್ನು ಎತ್ತಿ ಹಿಡಿದರು. ಅದ್ವೈತ ಎಂದರೆ ಎರಡಲ್ಲ ಒಂದು ಎಂದು, ಎಲ್ಲರೊಳಗೂ ಇರುವ ದೇವರು ಒಬ್ಬನೇ ಎಂದ ಮೇಲೆ ಧರ್ಮ ಧರ್ಮಗಳ ನಡುವೆ ಸಮಾನತೆ ಇರಬೇಕು ಎಂದು ಸಮಾನತೆ ತತ್ವವನ್ನು ಪ್ರತಿಪಾದಿಸಿದ್ದರು ಎಂದರು.
ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪೂರ್ಣಿಮಾ ಸ್ವಾಗತಿಸಿ, ಶಂಕರದಾಸ್ ನಿರೂಪಿಸಿ, ವಂದಿಸಿದರು.