ಜು.16 ರಿಂದ ನಾಲೆಗಳಿಗೆ ನೀರು ಬಿಡುಗಡೆ
ಮಂಡ್ಯ, ಜು.15: ಕಡೆಗೂ ರೈತರ ಹೋರಾಟಕ್ಕೆ ಸ್ಪಂದಿಸಿರುವ ರಾಜ್ಯ ಸರಕಾರ ಬೆಳೆಗಳಿಗೆ ನೀರು ಹರಿಸಲು ನಿರ್ಧಾರ ಮಾಡಿದ್ದು, ನಾಳೆಯಿಂದ (ಜು.16) 10 ದಿನಗಳ ಕಾಲ ಕೆಆರ್ಎಸ್ ಜಲಾಶಯದಿಂದ ನಾಲೆಗಳಲ್ಲಿ ನೀರು ಹರಿಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ಸೋಮವಾರ ಬೆಂಗಳೂರಿನಲ್ಲಿ ನಡೆದ ಐಸಿಸಿ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದು, ನಾಳೆ ಮಧ್ಯರಾತ್ರಿಯಿಂದ ನಾಲೆಗಳಿಗೆ ನೀರು ಹರಿಯಲಿದೆ.
ಸಚಿವರಾದ ಡಿ.ಸಿ.ತಮ್ಮಣ್ಣ, ಸಾ.ರಾ.ಮಹೇಶ್ ಸೇರಿದಂತೆ ಮಂಡ್ಯ ಜಿಲ್ಲೆ, ಟಿ.ನರಸೀಪುರ, ಪಿರಿಯಾಪಟ್ಟಣ ಶಾಸಕರು ಹಾಗೂ ನೀರು ನಿರ್ವಹಣಾ ಪ್ರಾಧಿಕಾರದ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.
Next Story