ಹೊಯ್ಸಳ-ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಆ.2: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 6ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಮಕ್ಕಳ ಸಾಹಸ ಪ್ರಕರಣವು ಆಗಸ್ಟ್ 2018ರಿಂದ ಜುಲೈ 2019ರೊಳಗೆ ನಡೆದಿರಬೇಕು. ಆ.1, 2001ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10ಸಾವಿರ ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. 2019ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ಜಿಲ್ಲೆಯ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಆ.31ರೊಳಗೆ ಕನ್ನಡ ಭಾಷೆಯಲ್ಲಿಯೇ ಸಲ್ಲಿಸತಕ್ಕದ್ದು ಎಂದು ಇಲಾಖೆ ಪ್ರಕಟಣೆ ತಿಳಿಸಿದೆ.