ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ-ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು, ಆ.2: ರಾಜ್ಯ ಸರಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ 25 ಸಾವಿರ ರೂ.ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ 1 ಲಕ್ಷ ರೂ.ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸುತ್ತದೆ.
2019ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಸಂಬಂಧಪಟ್ಟ ಜಿಲ್ಲೆಯ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಆ.31ರೊಳಗೆ ಸಲ್ಲಿಸತಕ್ಕದ್ದು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ಅರ್ಜಿಗಳನ್ನು ಕನ್ನಡ ಭಾಷೆಯಲ್ಲಿಯೇ ಸಲ್ಲಿಸತಕ್ಕದ್ದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಟಣೆ ತಿಳಿಸಿದೆ.
Next Story