ಇಬ್ಬರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿ
ಬೆಂಗಳೂರು, ಆ.3: ವರ್ಗಾವಣೆಗೊಂಡು ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಇಬ್ಬರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಶನಿವಾರ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ಡಾ.ಇ.ವಿ.ರಮಣರೆಡ್ಡಿ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಇಲಾಖೆಯ ಸರಕಾರದ ಕಾರ್ಯದರ್ಶಿಯಾಗಿ ಡಾ.ಎಸ್.ಸೆಲ್ವಕುಮಾರ್ ಅವರನ್ನು ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.
Next Story