ಸರಕಾರ ಟೇಕ್ ಆಫ್ ಆಗುವುದು ಯಾವಾಗ?: ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪ್ರಶ್ನೆ
ಫೈಲ್ ಚಿತ್ರ
ಬೆಂಗಳೂರು, ಆ.27: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ನೀವು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು 3 ದಿನ, ಸಂಪುಟ ರಚನೆಗೆ 26 ದಿನ, ಮತ್ತು ಖಾತೆ ಹಂಚಿಕೆಗೆ 6 ದಿನ ತಗೊಂಡಿರಿ. ಈಗ ಭಿನ್ನಮತ ಶಮನಕ್ಕೆ ಇನ್ನೆಷ್ಟು ದಿನ ಬೇಕು? ಈ ಎಲ್ಲದರ ನಡುವೆ ನಿಮ್ಮ ಸರಕಾರ ಟೇಕ್ ಆಫ್ ಆಗುವುದು ಯಾವಾಗ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಪುಟ ರಚನೆ, ಖಾತೆ ಹಂಚಿಕೆಯ ಕಸರತ್ತುಗಳನ್ನು ಗಮನಿಸಿದರೆ ಜನಪ್ರತಿನಿಧಿಗಳ ದನಿ ಉಡುಗಿಹೋಗಿ ಸಂವಿಧಾನೇತರ ಶಕ್ತಿಗಳೇ ವಿಜೃಂಭಿಸುತ್ತಿರುವ ಹಾಗೆ ಕಾಣಿಸುತ್ತಿದೆ. ಇದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಮಾರಕ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅನುಭವಿಸುತ್ತಿರುವ ಅವಮಾನ, ಅನ್ಯಾಯ, ಅಸಂತೋಷವನ್ನು ನೋಡುತ್ತಿದ್ದರೆ ಅವರ ರಾಜಕೀಯ ಎದುರಾಳಿಯಾದ ನನ್ನಂತಹವನಲ್ಲಿಯೂ ಅವರ ಬಗ್ಗೆ ಅನುಕಂಪ ಮೂಡುವಂತಾಗಿದೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
Next Story