ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: ಸ್ಥಳ ಬದಲಾವಣೆ
ಬೆಂಗಳೂರು, ಸೆ.16: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಸೆ.18ರಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಮೂರನೆ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಶಾಸಕಾಂಗ ಪಕ್ಷದ ಸಭೆಯನ್ನು ನಗರದ ಕ್ವೀನ್ಸ್ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story