ವಿವಿಧ ಅಪರಾಧ ಪ್ರಕರಣ: 21 ಮಂದಿಯ ಬಂಧನ, 90 ಲಕ್ಷ ರೂ. ಮೌಲ್ಯದ ಮಾಲು ಜಪ್ತಿ
ಬೆಂಗಳೂರು, ಸೆ.16: ವಿವಿಧ ಅಪರಾಧ ಪ್ರಕರಣಗಳಿಗೆ ಸಂಬಂಧಪಟ್ಟಂತೆ 21 ಮಂದಿಯನ್ನು ಬಂಧಿಸಿರುವ ಆಗ್ನೇಯ ವಿಭಾಗದ ಪೊಲೀಸರು, 90.20 ಲಕ್ಷ ರೂ. ಮೌಲ್ಯದ ಮಾಲು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಒಟ್ಟು 51 ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ 440 ಗ್ರಾಂ ಚಿನ್ನಾಭರಣ, 450 ಗ್ರಾಂ ಬೆಳ್ಳಿ, 47 ಬೈಕ್‌ಗಳು, 2 ಕಾರು, 4 ಸಾವಿರ ನಗದು, 22.500 ಗ್ರಾಂ ಗಾಂಜಾ ಹಾಗೂ 50 ಗ್ರಾಂ ಎಂಡಿಎಂಎ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ತಿಳಿಸಿದ್ದಾರೆ.
ಎಚ್‌ಎಸ್‌ಆರ್ ಲೇಔಟ್ ಪೊಲೀಸರು 9 ಪ್ರಕರಣಗಳನ್ನು ಪತ್ತೆಹಚ್ಚಿದರೆ, ಆಡುಗೋಡಿ ಠಾಣಾ ಪೊಲೀಸರು 2, ಕೋರಮಂಗಲ ಪೊಲೀಸರು 30 ಹಾಗೂ ಪರಪ್ಪನ ಅಗ್ರಹಾರ ಠಾಣಾ ಪೊಲೀಸರು 10 ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ ಎಂದು ಆಗ್ನೇಯ ವಿಭಾಗದ ಡಿಸಿಪಿ ಇಶಾ ಪಂತ್ ಹೇಳಿದರು.
Next Story