ಕೆಲಸದಿಂದ ವಜಾಗೊಳಿಸಿದ್ದಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಸರಕಾರಿ ನೌಕರ
ಚಾಮರಾಜನಗರ, ಅ.5: ಕೆಲಸದಿಂದ ವಜಾಗೊಳಿಸಿದ್ದಕ್ಕೆ ಬೇಸತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೌಕರರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ನಡೆದಿದೆ.
ಮೋಹನ್ ಕುಮಾರ್ (42) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಮೋಹನ್ ಕುಮಾರ್ ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೌಕರರಾಗಿದ್ದು, ಹೊರ ಗುತ್ತಿಗೆ ಆಧಾರದಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಗೊತ್ತಾಗಿದೆ.
ಕಳೆದ ಮೂರು ವರ್ಷಗಳಿಂದ ಚಾಮರಾಜನಗರ ಜಿಲ್ಲೆಯ ಸಂತೆಮರಹಳ್ಳಿ ಸಿಡಿಪಿಒ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮೋಹನ್ ಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಿದ್ದಾರೆ ಎನ್ನಲಾಗಿದ್ದು, ಇದರಿಂದ ಬೇಸತ್ತ ಅವರು ಕಚೇರಿಯಲ್ಲೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.
ವಿಷ ಸೇವಿಸಿದ ಮೋಹನ್ ಕುಮಾರ್ ರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
Next Story