ಕೊಲೆ ಆರೋಪಿಗೆ ಗುಂಡಿಕ್ಕಿ ಬಂಧನ
ಬೆಂಗಳೂರು, ಅ.13: ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯ ಮೇಲೆ ಪಿಸ್ತೂಲಿನಿಂದ ಗುಂಡು ಹಾರಿಸಿ ಬಂಧಿಸಿದ ಘಟನೆ ಇಲ್ಲಿನ ದೊಡ್ಡಬಳ್ಳಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಲ್ಲೋಹಳ್ಳಿಯ ಶಿವಶಂಕರ್ ಎಂಬಾತ ಆರೋಪಿ ಗಾಯಗೊಂಡಿದ್ದು, ಇಲ್ಲಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ಧಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಶಿವಶಂಕರ್, ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಬಳಿ ತಲೆಮರೆಸಿಕೊಂಡಿರುವ ಖಚಿತ ಮಾಹಿತಿ ಆಧರಿಸಿ ಪೊಲೀಸರು ಬಂಧಿಸಲು ಹೋದ ವೇಳೆ, ಪೊಲೀಸ್ ಸಿಬ್ಬಂದಿ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ಕೂಡಲೇ ಇನ್ಸ್ಪೆಕ್ಟರ್ ಗಜೇಂದ್ರ ಅವರು ಆತ್ಮರಕ್ಷಣೆಗಾಗಿ ಪಿಸ್ತೂಲಿನಿಂದ ಎರಡು ಸುತ್ತು ಗುಂಡು ಹಾರಿಸಿದ್ದು, ಅದರಲ್ಲಿ ಒಂದು ಆರೋಪಿ ಕಾಲಿಗೆ ತಗುಲಿ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.
Next Story