ಟೆಂಪೋ ಟ್ರಾವೆಲರ್ ಮಾಲಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ
ಬೆಂಗಳೂರು, ಅ 13: ಟೆಂಪೋ ಟ್ರಾವೆಲರ್ (ಟಿಟಿ) ವಾಹನಗಳ ಮಾಲಕನಿಗೆ ದುಷ್ಕರ್ಮಿಗಳು ಚಾಕುನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಗಿರಿನಗರ ವೃತ್ತದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಹೊಸಕೆರೆಹಳ್ಳಿಯ ಕೆರೆ ಕೊಡಿಯ ಶ್ರೀನಿವಾಸ್ (38) ಎಂಬುವರು ಗಾಯಗೊಂಡಿದ್ದು, ಕೆ.ಸಿ.ಜನರಲ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಅನೈತಿಕ ಸಂಬಂಧದ ಆರೋಪ ಹಾಗೂ ಹಳೇ ದ್ವೇಷದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಅವರ ಮೇಲಿನ ಹಲ್ಲೆಗೆ ಕಾರಣ ಎನ್ನಲಾಗಿದ್ದು, ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ, ತನಿಖೆ ಕೈಗೊಳ್ಳಲಾಗಿದೆ.
Next Story