ರಾಷ್ಟ್ರೀಯ ಪ್ರಶಸ್ತಿಗೆ ಮಾಧ್ಯಮಗಳಿಂದ ಅರ್ಜಿ ಆಹ್ವಾನ
ಸಾಂದರ್ಭಿಕ ಚಿತ್ರ
ಬೆಂಗಳೂರು, ಅ.14: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮತದಾರರ ಜಾಗೃತಿ ಹಾಗೂ ಶಿಕ್ಷಣಕ್ಕಾಗಿ ಮಾಧ್ಯಮ ಸಂಸ್ಥೆಗಳು ಸಲ್ಲಿಸಿದ ಸೇವೆಯನ್ನು ಗುರುತಿಸಿ ಮಾಧ್ಯಮ ಸಂಸ್ಥೆಗಳಿಗೆ ನೀಡುವ ರಾಷ್ಟ್ರಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ(ಟೆಲಿವಿಷನ್), ರೇಡಿಯೋ, ಆನ್ಲೈನ್ ಅಥವಾ ಸಾಮಾಜಿಕ ಮಾಧ್ಯಮ(ಇಂಟರ್ನೆಟ್)ಗಳು ಅರ್ಜಿ ಸಲ್ಲಿಸಬಹುದಾಗಿದೆ. ಇಚ್ಛೆಯುಳ್ಳ ಮಾಧ್ಯಮದವರು ಅ.31 ರೊಳಗೆ ಭಾರತ ಚುನಾವಣಾ ಆಯೋಗಕ್ಕೆ ನೇರವಾಗಿ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story