ಬಿಬಿಎಂಪಿ ವಿರೋಧ ಪಕ್ಷದ ನಾಯಕರಾಗಿ ಅಬ್ದುಲ್ ವಾಜೀದ್ ನೇಮಕ
ಬೆಂಗಳೂರು ಅ.22: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕರಾಗಿ ಮನೋರಾಯನಪಾಳ್ಯ ವಾರ್ಡ್ನ ಕಾಂಗ್ರೆಸ್ ಸದಸ್ಯ ಅಬ್ದುಲ್ ವಾಜೀದ್ ನೇಮಕಗೊಂಡಿದ್ದಾರೆ.
ಈ ಕುರಿತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಬಿಬಿಎಂಪಿ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಹಿಂದೆ ಅಬ್ದುಲ್ ವಾಜೀದ್ ಅವರು ಗಂಗಾಂಬಿಕಾ ಮಲ್ಲಿಕಾರ್ಜುನ ಅವರು ಮೇಯರ್ ಆಗಿದ್ದ ಸಂದರ್ಭದಲ್ಲಿ ಆಡಳಿತ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು.
Next Story