ಗಾಂಜಾ ಮಾರಾಟ: ಇಬ್ಬರು ಆರೋಪಿಗಳ ಬಂಧನ
ಉಡುಪಿ, ನ.7: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ನ.7ರಂದು ಉುಪಿ ಪಂದುಬೆಟ್ಟು ಎಂಬಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಶಿವಮೊಗ್ಗ ಅಣ್ಣಾನಗರ ನಿವಾಸಿ ಫೈರೋಜ್(20) ಹಾಗೂ ಶಿವಮೊಗ್ಗ ಮೆಕ್ಕಾ ಮಸೀದಿ ಬಳಿಯ ನಿವಾಸಿ ಮುಹಮ್ಮದ್ ಮೊಸೀನ್(20) ಎಂದು ಗುರುತಿಸಲಾಗಿದೆ. ಇವರಿಂದ 1.450 ಕೆ.ಜಿ. ಗಾಂಜಾ, 2 ಮೊಬೈಲ್ ಫೋನ್, ಗಾಂಜಾ ತೂಕ ಮಾಡುವ ಮಿಷನ್, ನಗದನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 33,000ರೂ. ಎಂದು ಅಂದಾಜಿಸಲಾಗಿದೆ.
ಉಡುಪಿ ಎಸ್ಪಿ ನಿಶಾ ಜೇಮ್ಸ್ ನಿರ್ದೆಶನದಲ್ಲಿ, ಹೆಚ್ಚುವರಿ ಎಸ್ಪಿ ಕುಮಾರ ಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಡಿವೈಎಸ್ಪಿ ಟಿ.ಆರ್.ಜೈಶಂಕರ್ ನೇತೃತ್ವ ದಲ್ಲಿ ಡಿಸಿಐಬಿ ಎಎಸ್ಸೈ ರವಿಚಂದ್ರ ಹಾಗೂ ಸಿಬ್ಬಂದಿಗಳಾದ ಸುರೇಶ, ಸಂತೋಷ ಕುಂದರ್, ಚಂದ್ರ ಶೆಟ್ಟಿ, ರಾಮು ಹೆಗ್ಡೆ, ರಾಘವೇಂದ್ರ ಉಪ್ಪುಂದ, ರಾಜ್ ಕುಮಾರ್, ದಯಾನಂದ ಪ್ರಭು, ಶಿವಾನಂದ ಪೂಜಾರಿ, ಚಾಲಕ ಶಾಂತಾರಾಮ ಈ ಕಾರ್ಯಾಚರಣೆ ನಡೆಸಿದ್ದಾರೆ.
Next Story