ಜೋಕಟ್ಟೆ : ಕೊಲೆಯತ್ನ ಪ್ರಕರಣ ; ಇಬ್ಬರು ಆರೋಪಿಗಳು ಸೆರೆ
ಮಂಗಳೂರು : ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಜೋಕಟ್ಟೆ - ಜತ್ತಬೆಟ್ಟು ಎಂಬಲ್ಲಿ ನಡೆದಿದ್ದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿ ನಿಗ್ರಹ ದಳ ಮತ್ತು ಪಣಂಬೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಬಜ್ಪೆ ಕಳವಾರು ನಿವಾಸಿಗಳಾದ ಪ್ರಶಾಂತ್ (25) ಹಾಗೂ ಮೇಘರಾಜ್ (18) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಬೈಕ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Next Story