ಉಡುಪಿ: ಜಿಲ್ಲಾ ಕಾಂಗ್ರೆಸ್‌ನಿಂದ ಇಂದಿರಾ ಗಾಂಧಿ ಹುಟ್ಟುಹಬ್ಬ
ಉಡುಪಿ : ಜಿಲ್ಲಾ ಕಾಂಗ್ರೆಸ್‌ನಿಂದ ಇಂದಿರಾ ಗಾಂಧಿ ಹುಟ್ಟುಹಬ್ಬ ಉಡುಪಿ, ನ.20: ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಜಿಲ್ಲಾ ಕಿಸಾನ್ ಘಟಕ ಜಂಟಿಯಾಗಿ ದಿ. ಇಂದಿರಾ ಗಾಂಧಿ ಅವರ 102ನೇ ಹುಟ್ಟುಹಬ್ಬವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ಅಧ್ಯಕ್ಷತೆಯಲ್ಲಿ ಮಂಗಳವಾರ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು.
ಮಾಜಿ ಶಾಸಕ ಯು.ಆರ್.ಸಭಾಪತಿ, ಇಂದಿರಾ ಗಾಂಧಿ ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿಕೊಳ್ಳುತ್ತಾ ರೈತರಿಗೆ ಭೂಮಸೂದೆ ಮೂಲಕ ಭೂಮಿ ಯನ್ನು ನೀಡಿ ಅವರು ಜೀವನವನ್ನು ಕಟ್ಟಿಕೊಳ್ಳಲು ಅನುವು ಮಾಡಿಕೊಟ್ಟ ಧೀಮಂತ ಮಹಿಳೆಯಾಗಿದ್ದಾರೆ ಎಂದರು.
20 ಅಂಶಗಳ ಕಾರ್ಯಕ್ರಮಗಳ ಮೂಲಕ ಬಡ ಕೃಷಿ ಕಾರ್ಮಿಕರಿಗೆ, ಮಹಿಳೆಯರಿಗೆ, ಪರಿಶಿಷ್ಟ ಜಾತಿಯವರಿಗೆ ಸರಕಾರದ ಸೌಲಭ್ಯಗಳು ದೊರಕುವಂತೆ ಮಾಡಿದರು.ಬ್ಯಾಂಕ್ ರಾಷ್ಟ್ರೀಕರಣ, ಪಂಚವಾರ್ಷಿಕ ಯೋಜನೆ ಗಳ ಮೂಲಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡರು ಎಂದರು.
ಕಿಸಾನ್ ಘಟಕದ ಕುಂದಾಪುರ ಬ್ಲಾಕ್ ಅಧ್ಯಕ್ಷ ಭಾಸ್ಕರ್ ಶೆಟ್ಟಿ, ಕಿಸಾನ್ ಘಟಕದ ಕಾರ್ಯಕಾರಿ ಸಮಿತಿ ಸದಸ್ಯ ಬಿಪಿನ್‌ಚಂದ್ರ ಪಾಲ್, ಇಂದಿರಾ ಗಾಂಧಿ ದೇಶಕ್ಕೆ ನೀಡಿದ ಕೊಡುಗೆಯನ್ನು ನೆನಪಿಸಿಕೊಂಡು ಯುವ ಪೀಳಿಗೆಗೆ ಇಂದಿರಾ ಕೊಡುಗೆ ಅರಿವಾಗಲು ನಿರಂತರ ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಬೇಕು ಎಂದರು.
ಸಭೆಯಲ್ಲಿ ಪಕ್ಷದ ಮುಖಂಡರಾದ ವೆರೋನಿಕಾ ಕರ್ನೇಲಿಯೋ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಬಿ.ನರಸಿಂಹ ಮೂರ್ತಿ, ಹರೀಶ್ ಕಿಣಿ, ಶಬ್ಬೀರ್ ಅಹ್ಮದ್, ಗೀತಾ ವಾಗ್ಳೆ, ಡಾ.ಸುನಿತಾ ಶೆಟ್ಟಿ, ರೋಶನಿ ಒಲಿವರ್, ಸತೀಶ್ ಅಮೀನ್ ಪಡುಕೆರೆ, ಶಂಕರ್ ಕುಂದರ್, ಉದ್ಯಾವರ ನಾಗೇಶ್ ಕುಮಾರ್, ಇಸ್ಮಾಯಿಲ್ ಆತ್ರಾಡಿ, ಸುನಿಲ್ ಬಂಗೇರಾ, ಚಂದ್ರಿಕಾ ಶೆಟ್ಟಿ, ಮಹಾಬಲ ಕುಂದರ್, ಕೀರ್ತಿ ಶೆಟ್ಟಿ, ಕಿಸಾನ್ ಘಟಕದ ಮುಖಂಡರಾದ ಉದಯ ಹೇರೂರು, ಸದಾನಂದ ಶೆಟ್ಟಿ ಶಿರ್ವ, ಜೆ.ಕೆ.ಆಳ್ವ ಪಾದೂರು, ಶಿವಾನಂದ ಅಮೀನ್ ಪಾಂಗಳ, ಉದಯ ಶೆಟ್ಟಿ ಕಾರ್ಕಳ, ಹರೀಶ್ ಶೆಟ್ಟಿ ಬ್ರಹ್ಮಾವರ, ನಿತ್ಯಾನಂದ ಶೆಟ್ಟಿ ಬ್ರಹ್ಮಾವರ, ಸೋಮಯ್ಯ ಕಾಂಚನ್ ಕಾರ್ಕಳ, ಸಂಜೀವ ಕಾಂಚನ್, ಭಾಸ್ಕರ್‌ರಾವ್ ಕಿದಿಯೂರು ಉಪಸ್ಥಿತರಿದ್ದರು.
ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ಎಲ್ಲೂರು ಶಶಿಧರ ಶೆಟ್ಟಿ ಸ್ವಾಗತಿಸಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ವಂದಿಸಿದರು. ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು.