ಕೇರಳ ಸಹಿತ ಹೊರ ರಾಜ್ಯಗಳಿಗೆ ಮರಳು ಸಾಗಾಟ ವಿರುದ್ಧ ಕ್ರಮ: ಸಚಿವ ಕೋಟ
ಮಂಗಳೂರು, ನ. 21: ಜಿಲ್ಲೆಯಿಂದ ಕೇರಳಕ್ಕೆ ಅಕ್ರಮವಾಗಿ ಮರಳು ಪೂರೈಕೆ ಮಾಡುತ್ತಿರುವುದರಿಂದ ಜಿಲ್ಲೆಯಲ್ಲಿ ಮರಳಿನ ಕೊರತೆ ಎದುರಾಗಿರುವ ಬಗ್ಗೆ ದೂರುಗಳು ಬಂದಿದೆ. ಹಾಗಾಗಿ ಅಕ್ರಮ ಮರಳು ಸಾಗಾಟಗಾರರ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿನ ತಮ್ಮ ಕೊಠಡಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಈ ಬಗ್ಗೆ ಇಂದು ಜಿಲ್ಲಾಧಿಕಾರಿ, ಗಣಿ ಇಲಾಖೆ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಆಯುಕ್ತರ ಜತೆ ಸಭೆ ನಡೆಸಿರುವುದಾಗಿ ಹೇಳಿದರು.
ಸರಕಾರಕ್ಕೆ ಯಾವುದೇ ಹಠವಿಲ್ಲ. ಆದರೆ ಅಕ್ರಮ ಸಾಗಾಟವನ್ನು ಸಹಿಸಲಾಗದು. ಹಾಗಾಗಿ ಗಣಿ ಹಾಗೂ ಪೊಲೀಸ್ ಇಲಾಖೆ ತಂಡ ರಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಅವರು ಹೇಳಿದರು.
Next Story