ಪತ್ರಿಕೋದ್ಯಮ ಅಪ್ರೆಂಟಿಸ್‌ಶಿಪ್: ಎಸ್ಸಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಮಂಗಳೂರು, ನ. 22: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2019-20ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆ ನಿರ್ವಹಣೆ ಕುರಿತು ತರಬೇತಿ ನೀಡಲು ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
10 ತಿಂಗಳ ತರಬೇತಿ ಇದಾಗಿದ್ದು, ಆಯ್ಕೆಯಾದ ಇಬ್ಬರು ಅಭ್ಯರ್ಥಿಗಳಿಗೆ ಮಾಸಿಕ 15 ಸಾವಿರ ರೂ. ಶಿಷ್ಯವೇತನ ನೀಡಲಾಗುವುದು.
ಅರ್ಹರು ತಮ್ಮ ಸ್ವ-ವಿವರ, 3-ಭಾವಚಿತ್ರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು 3 ಪ್ರತಿಗಳೊಂದಿಗೆ, ಡಿ.10ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಎರಡನೇ ಮಹಡಿ, ಪಿ.ಡಬ್ಲ್ಯೂಡಿ ಕಟ್ಟಡ, ಮಂಗಳೂರು-575001 ಇಲ್ಲಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0824-2424254ನ್ನು ಸಂಪರ್ಕಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.